ಪಾರ್ಕ್ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿದ ಬಿ. ಡಿ. ಎ

ಶನಿವಾರ, 5 ಫೆಬ್ರವರಿ 2022 (17:36 IST)
ಬೆಂಗಳೂರು ದಕ್ಷಿಣ ತಾಲೂಕು ಮತ್ತು ಆನೇಕಲ್ ತಾಲೂಕಿನ ಕೂಡ್ಲು ಮತ್ತು ಸಿಂಗಸಂದ್ರದಲ್ಲಿ ಏರ್ ಕ್ರಾಫ್ಟ್ ಎಂಪ್ಲಾಯೀಸ್ ಹೌಸಿಂಗ್ ಸೊಸೈಟಿ ಬಿಡಿಎದಿಂದ ಜಾಗವನ್ನು ಪಡೆದು ಬಡಾವಣೆ ನಿರ್ಮಾಣ ಮಾಡಿತ್ತು.
ಮೀಸಲಿಟ್ಟಿದ್ದ ಉಳಿದ 18 ಸ್ಥಳಗಳಲ್ಲಿ ಅನಧಿಕೃತವಾಗಿ ಶೆಡ್ ಗಳು ಮತ್ತು ಆರ್ ಸಿಸಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಶನಿವಾರ ಬಿಡಿಎ ವಿಶೇಷ ಕಾರ್ಯನಿರತ ಪಡೆಯ ಡಿವೈಎಸ್ ಪಿ ರವಿಕುಮಾರ್ ಮತ್ತು ಕಾರ್ಯಪಾಲಕ ಅಭಿಯಂತರ ಕೆ.ಮಹದೇವಗೌಡ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳು ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 15 ತಾತ್ಕಾಲಿಕ ಶೆಡ್ ಗಳು, 4 ಅಂಗಡಿಗಳು, 20 ಕ್ಕೂ ಹೆಚ್ಚು ಮನೆಗಳು, ಪ್ರಾರ್ಥನಾ ಮಂದಿರದಿಂದ ಒತ್ತುವರಿಯಾಗಿ ನಿರ್ಮಾಣಗೊಂಡಿದ್ದ ಕಟ್ಟಡ ಸೇರಿದಂತೆ 30 ಕ್ಕೂ ಹೆಚ್ಚು ಶೆಡ್ ಗಳನ್ನು ತೆರವುಗೊಳಿಸಿದ್ದಾರೆ.
ಬಿಡಿಎಗೆ ಸೇರಿರುವ ಸಾವಿರಾರು ಎಕರೆಯಷ್ಟು ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುತ್ತಿದೆ. ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವವರು ಸ್ವಯಂ ಪ್ರೇರಿತರಾಗಿ ಬಿಡಿಎ ಜಾಗವನ್ನು ವಾಪಸ್ ನೀಡಬೇಕು. ಇಲ್ಲವಾದರೆ, ಬಿಡಿಎ ಜಾಗವನ್ನು ವಶಪಡಿಸಿಕೊಂಡು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಿದೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ