ಬೆಂಗಳೂರು : ತಾಂತ್ರಿಕತೆ ಬೆಳೆದಷ್ಟೂ ಸೈಬರ್ ಕಳ್ಳರ ಹಾವಳಿ ಹೆಚ್ಚಾಗ್ತಿದೆ. ಇಷ್ಟು ದಿನ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಸೈಬರ್ ಕಳ್ಳರು ಇದೀಗ ವಿದ್ಯುತ್ ಬಿಲ್ನಲ್ಲೂ ಕೈಚಳಕ ತೋರಿಸಿದ್ದಾರೆ.
ಹೌದು. ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವ ನೆಪದಲ್ಲಿ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಂದ 53 ಸಾವಿರ ರೂ. ಎಗರಿಸಿದ್ದಾರೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರನ್ನ ವಂಚಿಸಿ 53 ಸಾವಿರ ರೂ. ಎಗಿರಿಸಿದ್ದಾರೆ.
ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ನಾರಾಯಣ್ ಪ್ರಸಾದ್ ಅವ್ರಿಗೆ ಬಿಲ್ ಕಟ್ಟುವಂತೆ ಹೇಳಿದ್ದಾರೆ. ಕರೆಂಟ್ ಬಿಲ್ ಕಟ್ಟದೇ ಇದ್ರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಸಿದಾಗ ನಾರಾಯಣ್ ಬಿಲ್ ಪಾವತಿಸಲು ಒಪ್ಪಿಕೊಂಡಿದ್ದಾರೆ. ನಂತರ ಒಂದು ಲಿಂಕ್ ಕಳಿಸಿ ಅದನ್ನು ಕ್ಲಿಕ್ ಮಾಡಿ ಫಾಲೋ ಮಾಡಿ ಅಂತಾ ಹೇಳಿದ್ದಾರೆ, ಅವರು ಹೇಳಿದಂತೆ ನಾರಾಯಣ್ ಲಿಂಕ್ ಕ್ಲಿಕ್ ಮಾಡಿ 1 ರೂ. ಕಳುಹಿಸಿದ್ದಾರೆ.