ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ

ಬುಧವಾರ, 31 ಮೇ 2023 (09:31 IST)
ಬೆಂಗಳೂರು : ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಚಲುವರಾಯಸ್ವಾ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.

ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿ.ಮೀ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿ.ಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿಲ್ಲ. 2022-23 ನೇ ಸಾಲಿನ 3ನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ.

2023 ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ (84%) ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ