ಮಕ್ಕಳಿರುವ ಮನೆಯಲ್ಲಿ ನೀಲಗಿರಿ ತೈಲವನ್ನಿಡುವ ಪೋಷಕರೇ ಎಚ್ಚರ

ಸೋಮವಾರ, 25 ಫೆಬ್ರವರಿ 2019 (06:18 IST)
ಮೈಸೂರು : ಜ್ಯೂಸ್ ಎಂದು ತಿಳಿದು ನೀಲಗಿರಿ ತೈಲ ಕುಡಿದು 5 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.


ಕೂಡಿಗೆ ಕೊಪ್ಪಲು ಗ್ರಾಮದ ಪ್ರಸನ್ನ ಕುಮಾರ್ ಎಂಬವರ ಮಗಳು ವರ್ಷಿತ (5) ಮೃತಪಟ್ಟ ಬಾಲಕಿ. ಈಕೆ ಮನೆಯಲ್ಲಿಟ್ಟಿದ್ದ ನೀಲಗಿರಿ ತೈಲವನ್ನು ಜ್ಯೂಸ್ ಎಂದು ಕುಡಿದಿದ್ದಾಳೆ. ಅಸ್ವಸ್ಥಳಾದ ವರ್ಷಿತಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರ್ಷಿತಾ ಸಾವನ್ನಪ್ಪಿದ್ದಾಳೆ.


ಅಂಬುಲೆನ್ಸ್ ಸಮಯಕ್ಕೆ ಸರಿಯಾಗಿ ಗ್ರಾಮಕ್ಕೆ ಬರಲಿಲ್ಲ. ಹಾಗೂ ಅದರಲ್ಲಿ ಅಗತ್ಯ ಚಿಕಿತ್ಸಾ ಸಾಮಗ್ರಿಗಳು ಹಾಗೂ ಆಮ್ಲಜನಕ ಇರದ ಕಾರಣದಿಂದ ಚಿಕಿತ್ಸೆ ಫಲಕಾರಿಯಾಗದೇ ಮಗಳು ಮೃತಪಟ್ಟಿದ್ದಾಳೆ ಎಂದು ಮೃತ ಬಾಲಕಿ ತಂದೆ ಪ್ರಸನ್ನಕುಮಾರ್ ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ