ಅಪಘಾತ ಸಂಬಂಧಿಸಿದಂತೆ ಎಚ್ಚರಿಕೆ ನೀಡಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ಭಾನುವಾರ, 31 ಅಕ್ಟೋಬರ್ 2021 (13:55 IST)
ಜಿಲ್ಲೆಯಲ್ಲಿರುವ ರಸ್ತೆಗಳ ಸ್ಥಿತಿ ಹದಗೆಟ್ಟಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಈ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಸುಧಾರಿತ ರಸ್ತೆಗಳನ್ನಾಗಿ ಮಾಡ ಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಸೂಚಿಸಿದರು.
 
ತಾಲೂಕಿನ ಬೀರಸಂದ್ರ ಗ್ರಾಮದ ಬೆಂ. ಗ್ರಾ. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿ ದ ಅವರು, ಹದಗೆಟ್ಟಿರುವ ರಸ್ತೆಗಳ ದುರಸ್ತಿ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಟೋಲ್‌ಗ‌ಳಲ್ಲಿ ವಿಐಪಿ ವಾಹನಗಳು ಚಲಿಸುವ ಮಾರ್ಗಗಳಿಗೆ ಸ್ಥಳಾವಕಾಶ ಮಾಡಿ ಕೊಡಿ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ದುರಸ್ತೀಕರಣ, ರಸ್ತೆ ದೀಪಗಳ ಸರಿಯಾದ ಅಳವಡಿಕೆ, ರಸ್ತೆ ಬದಿ ಯ ಅನಗತ್ಯ ಅಂಗಡಿ ಮುಂಗಟ್ಟಗಳ ತೆರವು, ಸೂಕ್ತ ಏಕಮುಖ ರಸ್ತೆಗಳ ರಚನೆ, ರೋಡ್‌ ಮಾರ್ಕಿಂಗ್‌ ಹಾಗೂ ಮುಂತಾದ ಸಮಸ್ಯೆಗಳ ಕುರಿತಂತೆ ಸಾರಿಗೆ, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ