ರಾಜ್ಯ ಸರಕಾರದ ಆಡಳಿತಕ್ಕೆ ಬೇಸತ್ತು ಎಸ್.ಎಂ.ಕೃಷ್ಣ ರಾಜೀನಾಮೆ: ಜಗದೀಶ್ ಶೆಟ್ಟರ್

ಭಾನುವಾರ, 29 ಜನವರಿ 2017 (15:24 IST)
ರಾಜ್ಯ ಸರಕಾರದ ಆಡಳಿತಕ್ಕೆ ಬೇಸತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
 
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಸಜ್ಜನ ರಾಜಕಾರಣಿ. ಎಸ್‌ಎಂಕೆ ರಾಜೀನಾಮೆಯಿಂದ ರಾಜ್ಯ ಸರಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪಕ್ಷದ ಹಿರಿಯ ನಾಯಕರ ರಾಜೀನಾಮೆಯಿಂದ ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದರು.
 
ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಕಿಮ್ಮತ್ತಿಲ್ಲ. ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಇದರಿಂದ ಜಿಗುಪ್ಸೆಗೊಂಡು ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಗೊತ್ತಾಗುತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ರೀತಿ ವರ್ತಿಸುತ್ತಿದ್ದಾರೆಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ