ಕೋವಿಡ್ ಪರಿಸ್ಥಿತಿ ಪರಿಶೀಲಿಸಿ ತರಗತಿಗಳ ಆರಂಭ
1 ರಿಂದ 5ನೇ ತರಗತಿಗಳ ಭೌತಿಕ ತರಗತಿಗಳ ಪುನಾರಂಭದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ ನಾಗೇಶ್, ಇಂದಿನವರೆಗೆ ರಾಜ್ಯದಲ್ಲಿ ಕೋವಿಡ್-19 ಮೂರನೇ ಅಲೆ ಹೆಚ್ಚಾಗಿ ಕಂಡು ಬಂದಿಲ್ಲ. ಆದರೂ, ಕೋವಿಡ್ ಟಾಸ್ಕ್‌ಫೋರ್ಸ್ ಈ ಕುರಿತು ಗಂಭೀರವಾಗಿ ಅಧ್ಯಯನ ಮಾಡುತ್ತಿದೆ. 6ರಿಂದ 8ನೇ ತರಗತಿಗಳು ಕೆಲ ದಿನಗಳ ಹಿಂದಷ್ಟೇ ಆರಂಭವಾಗಿದ್ದು, ಮಕ್ಕಳ ವರ್ತನೆ, ಕೋವಿಡ್ ನಿಯಮಗಳ ಪಾಲನೆ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಕೆಲ ದಿನಗಳ ನಂತರ ಟಾಸ್ಕ್‌ಫೋರ್ಸ್ ಸಭೆ ನಡೆಸಿ ನಂತರ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದರು.