ಬೆಳಗಾವಿ ಜೈಲಿಂದ್ದ ಬೆಂಗಳೂರಿಗೆ ಪ್ರದೋಷ್ ಶಿಫ್ಟ್‌, ಕಾರಣ ಹೀಗಿದೆ

Sampriya

ಬುಧವಾರ, 9 ಅಕ್ಟೋಬರ್ 2024 (16:04 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪ್ರದೋಷ್‌ನನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೀಟ್‌ಮೆಂಟ್ ಪಡೆದ ಹಿನ್ನೆಲೆ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಅವರು 2024ರ ಆಗಸ್ಟ್ 27ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರದೋಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ರೌಡಿ, ವಿಲ್ಸನ್ ಗಾರ್ಡನ್ ನಾಗ ಆಯೋಜಿಸಿದ್ದ ಟೀ ಪಾರ್ಟಿಯಲ್ಲಿ ನಟ ದರ್ಶನ್ ಮೇಲೆ ಬೀಳಬೇಕಿದ್ದ ಪ್ರಕರಣವನ್ನು ಆರೋಪಿ ಪ್ರದೋಷ್ ಮೇಲೆ ಹೊರಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಹಿಂದೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ಪ್ರದೋಷ್‌ನನ್ನು  ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಇದೀಗ ಕೋರ್ಟ್ ಆದೇಶದಂತೆ ಪ್ರದೋಷ್‌ನನ್ನು ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ಇಂತಹ ಆದೇಶಗಳನ್ನು ಹೊರಡಿಸುವಾಗ ಮ್ಯಾಜಿಸ್ಟ್ರೇಟ್‌ಗಳು ಯೋಚನೆ ಮಾಡಬೇಕು. ದರ್ಶನ್ ಕಾಫಿ ಮಗ್ ಹಿಡಿದುಕೊಂಡು ಕುಳಿತಿದ್ದ ಸ್ಥಳದಲ್ಲಿ ಪ್ರದೋಷ್ ಇದ್ದನೇ ಎಂದು ನೋಡಿಕೊಳ್ಳಬೇಕು. ಈ ಸಂದರ್ಭದಲ್ಲಿ ತನ್ನ ಕೊಠಡಿಯಲ್ಲಿ ಕುಳಿತಿದ್ದ ಪ್ರದೋಷ್ ಅನ್ಯಾಯವಾಗಿ ದರ್ಶನ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ