ಬೆಲೆಕೇರಿ ಅದಿರು ನಾಪತ್ತೆ ಹಗರಣ: ಮತ್ತೆ 14 ದಿನ ನ್ಯಾಯಾಂಗ ಬಂಧನದಲ್ಲಿ ಲಾಡ್

ಸೋಮವಾರ, 20 ಜುಲೈ 2015 (11:57 IST)
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಕ್ಕಾಗಿದ್ದ ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಅವರನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದೆ. 
 
ಸಿಬಿಐ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ, ಇಂದು ಆರೋಪಿ ಶಾಸಕ ಲಾಡ್ ಅವರನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿತು. ಅಲ್ಲದೆ ಶಾಸಕರ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಇದೇ ವೇಳೆ ಜುಲೈ 22ರಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅದು ತಿಳಿಸಿತು.
 
ಕಂಪನಿಯೊಂದರ ಮೂಲಕ 15000 ಟನ್ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಸಕರನ್ನು ಸಿಬಿಐ ಪೊಲೀಸರು ಬಂಧಿಸಿದ್ದರು. ಅಲ್ಲದೆ ನ್ಯಾಯಾಲಯದ ಅನುಮತಿ ಪಡೆದು ತಮ್ಮ ವಶಕ್ಕೆ ಪಡೆದಿದ್ದ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ನಿನ್ನೆ ಬಳ್ಳಾರಿ ನಗರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಅಲ್ಲದೆ ನಿನ್ನೆಗೆ ಸಿಬಿಐ ವಿಚಾರಣಾ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಸಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. 

ವೆಬ್ದುನಿಯಾವನ್ನು ಓದಿ