ಬೆಳಗಾವಿ ಅಧಿವೇಶನ ಸಮಯ ಉಗ್ರ ಹೋರಾಟಕ್ಕೆ ಸಿದ್ಧಗೊಂಡವರು ಯಾರು ಗೊತ್ತಾ?

ಶನಿವಾರ, 1 ಡಿಸೆಂಬರ್ 2018 (19:23 IST)
ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಸಮಯ ಲಕ್ಷಕ್ಕೂ ಅಧಿಕ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ.

ರಾಜ್ಯ ಸರಕಾರದ ಕ್ರಮದ ವಿರುದ್ಧ ಬಿಜೆಪಿ ರೈತ ಮೋರ್ಚಾ ಆರೋಪಿಸಿದೆ. ಕಲಬುರ್ಗಿಯಲ್ಲಿ ಮಾತನಾಡಿದ ರೈತ ಮೋರ್ಚಾ ಮುಖಂಡ ಬಸವರಾಜ ಇಂಗಿನ್, ರಾಜ್ಯ ಸರ್ಕಾರವೇ ನೂರಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಬರ ತಾಲೂಕುಗಳ ಘೋಷಣೆಯಾಗಿ ಎರಡು ತಿಂಗಳಾಗುತ್ತಾ ಬಂದರೂ ಬರ ನಿರ್ವಹಣೆ ಕಾರ್ಯ ಆರಂಭಗೊಂಡಿಲ್ಲ. ಬರ ನಿರ್ವಹಣೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ.

ಹೀಗಾಗಿ ಬಿಜೆಪಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬರದ ಸ್ಥಿತಿಗತಿಯ ಅಧ್ಯಯನ ನಡೆಸುತ್ತಿದೆ. ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಉಗ್ರ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಚಳಿಗಾಲದ ಅಧವೇಶನದ ವೇಳೆ ಒಂದು ಲಕ್ಷಕ್ಕೂ ಅಧಿಕ ರೈತರು ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ