ಬೆಂ-ಮೈ ಹೈವೇ ಟೋಲ್​ ಸಂಗ್ರಹ ಆರಂಭ

ಮಂಗಳವಾರ, 14 ಮಾರ್ಚ್ 2023 (14:01 IST)
ಪ್ರಧಾನಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಂಡ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಇಂದಿನಿಂದಲೇ ಟೋಲ್ ವಿಧಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಕಲೆಕ್ಟ್ ಮಾಡಲಾಗ್ತಿದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಸರ್ಕಾರದ ನಡೆಗೆ ವಿವಿಧ ಸಂಘಟನೆಗಳು ಆಕ್ರೋಶಗೊಂಡಿವೆ.75 ರಿಂದ 135 ರೂ ಟೋಲ್ ಹಣ ಕಲೆಕ್ಟ್ ಮಾಡಲು ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರ ಎರಡು ಟೊಲ್ ಪ್ಲಾಜಾ ನಿರ್ಮಿಸಿದೆ. ಬೆಂಗಳೂರಿಂದ ಮೈಸೂರಿಗೆ ಹೋಗುವರು ಕಣಮಿಣಕಿ ಬಳಿ, ಮೈಸೂರು ಹಾಗೂ ರಾಮನಗರ ಕಡೆಯಿಂದ ಬೆಂಗಳೂರು ಪ್ರವೇಶಿಸುವವರು ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟಬೇಕಿದೆ. ಟೋಲ್ ಪ್ಲಾಜಾ ಬಳಿ ಪೊಲೀಸರು ಬಿಗಿ ಬಂದೂಬಸ್ತ್ ವಹಿಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ