Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

Sampriya

ಬುಧವಾರ, 16 ಏಪ್ರಿಲ್ 2025 (20:48 IST)
Photo Credit X
ಬೆಂಗಳೂರು: ಮಹಿಳೆಯೊಬ್ಬರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ, ಅಶ್ಲೀಲ ಸನ್ನೆಗಳ ಮೂಲಕ ಅನುಚಿತವಾಘಿ ವರ್ತಿಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಆಶ್ಲೀಲ ವರ್ತನೆ ಬಗ್ಗೆ ಪ್ರಶ್ನಿಸಿದ್ದಕ್ಕೆ  ಮಹಿಳೆಯ ಪತಿ ಸೇರಿದಂತೆ ಏಳು ಜನರ ಮೇಲೆ ಹಲ್ಲೆ ನಡೆಸಿದ್ದಾನೆ.

ಏಪ್ರಿಲ್ 13 ರಂದು ಈ ಘಟನೆ ನಡೆದಿದೆ. ಆರೋಪಿ ತನ್ನ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ. ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಬಳಿಕ ಸ್ಥಳದಿಂದ ಪರಾರಿಯಾಗಿರುವ ಕಾಮುಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ.

ಮಹಿಳೆ ತನ್ನ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರು ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿ ತನ್ನ ಪ್ಯಾಂಟ್ ಜೀಪ್ ಬಿಚ್ಚಿ ಮಾರ್ಮಾಂಗವನ್ನು ತೋರಿಸಿದ್ದಾನೆ. ಅಲ್ಲದೇ ಅಶ್ಲೀಲ ಸನ್ನೆಗಳ ಮೂಲಕ ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ.

ಮಹಿಳೆ ಕೂಡಲೇ ತನ್ನ ಪತಿಯನ್ನು ಸಹಾಯಕ್ಕಾಗಿ ಕರೆದಿದ್ದಾಳೆ. ಇದರಿಂದ ಆಕ್ರೋಶಗೊಂಡ ಆರೋಪಿ ಆಕೆಯ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಜಗಳ ಬಿಡಿಸಲು ಬಂದ ನೆರೆಹೊರೆಯವರ ಮೇಲೂ ಹಾಲೊ ಬ್ಲಾಕ್‌ಗಳು, ಹೂವಿನ ಕುಂಡಗಳು ಮತ್ತು ಕಿಟಕಿಯ ಗಾಜುಗಳಿಂದ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದ ತನ್ನ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಈ ಹಿಂದೆಯೂ ಹಲವು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ