ಮುಂಬೈ ಕಾಟಕ್ಕೆ ಬೆಂಗಳೂರು ತತ್ತರ : 3 ಕೊರೊನಾ ಕೇಸ್

ಶುಕ್ರವಾರ, 22 ಮೇ 2020 (18:40 IST)
ಮುಂಬೈನಿಂದ ಬಂದವರಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿದ್ದು, ಇದು ಬೆಂಗಳೂರು ಮಾತ್ರವಲ್ಲ ಗ್ರಾಮಾಂತರ ಜಿಲ್ಲೆಯ ಜನರಲ್ಲೂ ಆತಂಕಕ್ಕೆ ಕಾರಣವಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ತಾಂಡ್ಯ ಮೂಲದ 6 ಮಂದಿ ಕಾರ್ಮಿಕರು ಇತ್ತೀಚೆಗಷ್ಟೇ ಮಹಾರಾಷ್ಟ್ರದಿಂದ ಬಂದಿದ್ದಾರೆ. ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ  ಮೂರು ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಸೋಂಕು ತಗುಲಿದ 3 ಮಂದಿ ಸೋಂಕಿತರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳಿಸಲಾಗಿದೆ.

ಉಳಿದವರ ಫಲಿತಾಂಶ ಬರಬೇಕಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ