ಬಂಗಾಳ ಸಚಿವನಿಂದ ರಾಷ್ಟ್ರಪತಿ ಅವಹೇಳನ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಹೇಳನ ಮಾಡಿ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಮಾತನಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಅಖಿಲ್ ಗಿರಿ ಅವರು ರಾಷ್ಟ್ರಪತಿಗಳನ್ನು ಅವಹೇಳನ ಮಾಡಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, BJP ಪ್ರತಿಭಟನೆಗೆ ಮುಂದಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅಲ್ಲಿನ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಚಿವ ಗಿರಿ ಗುರುವಾರ ನಂದಿಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಆ ಸಂದರ್ಭದಲ್ಲಿ ಜನ ಹೇಗೆ ಕಾಣಿಸುತ್ತಾರೆ ಎಂಬುದರ ಮೇಲೆ ಅವರ ವ್ಯಕ್ತಿತ್ವ ಅಳೆಯಬಾರದು. ನಾವು ರಾಷ್ಟ್ರಪತಿಗಳ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಅವರು ಹೇಗೆ ಕಾಣುತ್ತಾರೆ? ಎಂದು ಗಹಗಹಿಸಿ ನಗುತ್ತಾ ಹೇಳುತ್ತಿರುವುದು ವಿಡಿಯೊದಲ್ಲಿದೆ. ಸಚಿವರು ಈ ಮಾತು ಹೇಳುತ್ತಿದ್ದಂತೆಯೇ ಅಲ್ಲಿ ಸೇರಿದ್ದವರೆಲ್ಲ ಹಾಸ್ಯ ಮಾಡಿ ನಗುತ್ತಿರುವ ದೃಶ್ಯ ವಿಡಿಯೊದಲ್ಲಿದೆ.