ಬೆಂಗಳೂರಿಗರು ಒತ್ತಡದಲ್ಲಿರುವುದರಿಂದ 1 ಗಂಟೆವರೆಗೆ ಮದ್ಯದಂಗಡಿ ಓಪನ್: ಸಚಿವ ಮೇಟಿ

ಮಂಗಳವಾರ, 2 ಆಗಸ್ಟ್ 2016 (15:08 IST)
ರಾಜ್ಯದ ಮೂರು ನಾಲ್ಕು ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಇನ್ನೂ ಜಾರಿಯಲ್ಲಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವುದರ ಜೊತೆಗೆ ಅವರಿಗೆ ಪುನರ್ವಸತಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವ ಎಚ್‌.ವೈ.ಮೇಟಿ ತಿಳಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಬೆಂಗಳೂರಿನ ಜನ ಒತ್ತಡದಲ್ಲಿರುತ್ತಾರೆ. ಹಾಗಾಗಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆಯವರೆಗೂ ಮಧ್ಯದ ಅಂಗಡಿ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಆದರೆ, ರಾಜ್ಯದ ಇತರೆ ಜಿಲ್ಲೆಯಲ್ಲಿ ರಾತ್ರಿ ಒಂದು ಗಂಟೆವರೆಗೂ ಮಧ್ಯದ ಅಂಗಡಿ ಓಪನ್ ಮಾಡಲು ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ರಾಜ್ಯದಲ್ಲಿ ಹೊಸ ಬಾರ್ ಲೈಸನ್ಸ್ ನೀಡುವ ಹಾಗೂ ಪಾನ ನಿಷೇಧ ಜಾರಿ ಮಾಡುವ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.
 
ಮದ್ಯದ ಅಂಗಡಿಯಲ್ಲಿ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಧ್ಯ ಮಾರಾಟ ಮಾಡಲಾಗುತ್ತಿದೆ. ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡುವುದನ್ನು ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಮದ್ಯದ ಅಂಗಡಿಯಲ್ಲಿ ದರ ಪಟ್ಟಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
 
ಅಬಕಾರಿ ಅಧಿಕಾರಿಗಳಿಗೆ ಯಾವುದೇ ಟಾರ್ಗೆಟ್ ನೀಡುವ ಪ್ರಶ್ನೆಯೇ ಇಲ್ಲ. ಅಂದಾಜು ಲೆಕ್ಕಚಾರದ ಆಧಾರದ ಮೇಲೆ ಅವರಿಗೆ ಟಾರ್ಗೆಟ್ ನೀಡಲಾಗುತ್ತದೆ ಎಂದು ಅಬಕಾರಿ ಸಚಿವ ಎಚ್‌.ವೈ.ಮೇಟಿ ತಿಳಿಸಿದರು. 

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ