ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ವಿಡಿಯೋ ಮಾಡಿದ ಐವರು ಆರೋಪಿಗಳ ಬಂಧನ

ಸೋಮವಾರ, 30 ಮೇ 2016 (18:31 IST)
ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಲ್ಲದೇ ಗ್ಯಾಂಗ್‌ರೇಪ್ ದೃಶ್ಯಗಳನ್ನು ಮೊಬೈಲ್‌ನಲ್ಲಿ ರಿಕಾರ್ಡ್ ಮಾಡಿಕೊಂಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
 
ಕಳೆದ ಮೇ 14 ರಂದು ಮಹಿಳೆ ತನ್ನ ಬಾಯ್‌ಫ್ರೆಂಡ್‌‌ನೊಂದಿಗೆ ಹೋಟೆಲ್‌ನಲ್ಲಿ ಪಾರ್ಟಿ ಮುಗಿಸಿಕೊಂಡು ಅಂಚೆಪಾಳ್ಯದಲ್ಲಿರುವ ಮನೆಗೆ ಮರಳುತ್ತಿರುವ ಸಂದರ್ಭದಲ್ಲಿ ಐವರು ಆರೋಪಿಗಳು ಮಹಿಳೆಯ ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಬೆದರಿಸಿ, ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ. 
 
ಆರೋಪಿಗಳನ್ನು ರಾಜು, ಶರದ್ ಯಾದವ್, ಉದಯ್, ಮನು ಮತ್ತು ಹರೀಶ್ ಎಂದು ಗುರುತಿಸಲಾಗಿದೆ.
 
ಐವರೂ ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಮೊಬೈಲ್‌ನಲ್ಲಿ ರಿಕಾರ್ಡ್ ಮಾಡಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಗ್ಯಾಂಗ್‌ರೇಪ್ ವಿಡಿಯೋವನ್ನು ಇಂಟರ್ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾರೆ.
 
ಆರೋಪಿಗಳ ಬೆದರಿಕೆಗೆ ಮಣಿಯದ ಮಹಿಳೆ ಕೆಲ ದಿನಗಳ ನಂತರ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್‌ರೇಪ್ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಕೃಷ್ಣನ ಜನ್ಮಸ್ಥಳಕ್ಕೆ ಅಟ್ಟಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ