ಬೆಂಗಳೂರಿನ ನ್ಯಾಯಪೀಠದ ಮುಂದೆಯೇ ಕತ್ತುಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Sampriya

ಬುಧವಾರ, 3 ಏಪ್ರಿಲ್ 2024 (15:06 IST)
ಬೆಂಗಳೂರು: ಇಂದು ಮಧ್ಯಾಹ್ನ ಇಲ್ಲಿನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್ ಸಂಖ್ಯೆ 1ರಲ್ಲಿ ವ್ಯಕ್ತಿಯೊಬ್ಬಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ದೈನಂದಿನ ಪ್ರಕರಣಗಳ ವಿಚಾರಣ ನಡೆಸುವ ವೇಳೆ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು. ಈ ವೇಳೆ ತನ್ನಲ್ಲಿದ್ದ ಹರಿತವಾದ ಬ್ಲೇಡ್‌ನಿಂದ ಆಯುಧದಿಂದ ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣವೇ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಇನ್ನೂ ಹೈಕೋರ್ಟ್‌ ಪ್ರವೇಶದ ಭದ್ರೆತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಪ್ರಭಾಕರ ಶಾಸ್ತ್ರಿ ಅವರು,  ಈ ವ್ಯಕ್ತಿ ಇಂತಹ ಆಯುಧದೊಂದಿಗೆ ಹೇಗೆ ಒಳ ಪ್ರವೇಶಿಸಿದರು ಮತ್ತು ಪೊಲೀಸರು ಏನು ಮಾಡುತ್ತಿರುತ್ತಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ