ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Sampriya

ಶುಕ್ರವಾರ, 22 ನವೆಂಬರ್ 2024 (18:40 IST)
ಬೆಂಗಳೂರು: ತನ್ನ ಮಕ್ಕಳಿಬ್ಬರು ಹೆತ್ತಮ್ಮನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನೂ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  

ಕೊಲೆಯಾದ ಮಕ್ಕಳನ್ನು ಸುಭಂ (7), ಸಿಯಾ (3) ಎಂದು ಗುರುತಿಸಲಾಗಿದೆ. ಮಹಿಳೆ ಮೊದಲು ಟೈನ್ ದಾರದಿಂದ ಕತ್ತು ಹಿಸುಕಿ ಮಕ್ಕಳಿಬ್ಬರ ಕೊಲೆ ಮಾಡಿದ್ದಾಳೆ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇನ್ನೂ ಈ ಹತ್ಯೆಗೂ ಮುನ್ನಾ ಗಂಡ ಹೆಂಡತಿಗೆ ಜಗಳ ನಡೆದಿದ್ದು, ಇದೇ ಕಾರಣಕ್ಕೆ ಮಕ್ಕಳನ್ನು ಕೊಂದಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು, ಕೊಲೆ ಕುರಿತಂತೆ ಮಕ್ಕಳ ತಂದೆ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಇದೀಗ ದೂರು ನೀಡಿದ್ದಾರೆ.

ಸದ್ಯ ತಂದೆಯ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ