ಸೆ.11ರಂದು ಬೆಂಗಳೂರು ಬಂದ್‌ ಖಾಸಗಿ ಬಸ್‌, ಆಟೋ, ಟ್ಯಾಕ್ಸಿಗಳ ಸೇವೆ ಸ್ಥಗಿತ

ಭಾನುವಾರ, 3 ಸೆಪ್ಟಂಬರ್ 2023 (15:37 IST)
ಶಕ್ತಿ ಯೋಜನೆ ಜಾರಿ ಬಳಿಕ ಆಟೋ ಟ್ಯಾಕ್ಸಿ, ಖಾಸಗಿ ಬಸ್ ಮಾಲೀಕರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ ಹಾಕಿದ್ದರೂ ಸರ್ಕಾರ ಸ್ಪಂದನೆ ನೀಡಲಿಲ್ಲ. ಆದ್ದರಿಂದ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದ 32 ಸಂಘಟನೆಗಳು ಒಳಗೊಂಡಂತೆ ಸೆ.11ರಂದು ಮುಷ್ಕರವನ್ನು ಹಮ್ಮಿಕೊಳ್ಳಲಾಗಿದ್ದು, ಇಡೀ ಬೆಂಗಳೂರು ಬಂದ್‌ ಮಾಡಲಾಗುತ್ತದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್‌ ಶರ್ಮ ಹೇಳಿದ್ದಾರೆ.ಒಟ್ಟಾರೆ, ಬೆಂಗಳೂರಿನಲ್ಲಿ 10 ರಿಂದ 12 ಲಕ್ಷ ವಾಹನಗಳ ಸಂಚಾರ ಸ್ತಬ್ಧವಾಗಲಿದೆ. ಇದರಿಂದ ಸಾರ್ವಜನಿಕ ಸೇವೆಯಲ್ಲು ಉಂಟಾಗುವ ನಷ್ಟವನ್ನು ಸರ್ಕಾರವೇ ಭರಿಸಬೇಕಾಗುತ್ತದೆ. ಜೊತೆಗೆ, ಸಮಸ್ಯೆಯಾದಲ್ಲಿ ಸರ್ಕಾರವೇ ಹೊಣೆಯಾಗಲಿದೆ ಎಂದು ಒಕ್ಕೂಟದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ