17 ವರ್ಷದ ಸೋದರಸೊಸೆ ಲೈಂಗಿಕ ಕಿರುಕುಳ ನೀಡಿದ 45 ವರ್ಷದ ಪೊಲೀಸ್ ಪೇದೆಯ ಬಂಧನ

ಬುಧವಾರ, 18 ಮೇ 2016 (18:06 IST)
17 ವರ್ಷದ ಸೋದರಸೊಸೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 45 ವರ್ಷ ವಯಸ್ಸಿನ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ.
 
ಬಾಲಕಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಜೊತೆ ರಾಜಾಜಿ ನಗರದಲ್ಲಿರುವ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದಳು ಎಂದು ಮೂಲಗಳು ತಿಳಿಸಿವೆ.
 
ಏತನ್ಮಧ್ಯೆ, ಆರೋಪಿ ಪೊಲೀಸ್ ಪೇದೆ ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿ, ಆಸ್ತಿ ವಿವಾದದಲ್ಲಿ ತಮ್ಮನ್ನು ಗುರಿಯಾಗಿಸಲಾಗುತ್ತದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.
 
 ಆರೋಪಿ ಪೊಲೀಸ್ ಪೇದೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ