ವಿಚಾರಣೆಗೆ ಹಾಜರಾಗಲು ಯಡಿಯೂರಪ್ಪಗೆ ಪೊಲೀಸರಿಂದ ನೊಟಿಸ್ ಜಾರಿ

ಶುಕ್ರವಾರ, 22 ಸೆಪ್ಟಂಬರ್ 2017 (17:43 IST)
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಹೈಕೋರ್ಟ್`ನಿಂದ ಕೊಂಚ ರಿಲೀಫ್ ಪಡೆದಿದದ್ದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಟ ಎದುರಾಗಿದೆ. ಈಶ್ವರಪ್ಪ ಪಿಎ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ.

 ಮಲ್ಲೇಶ್ವರಂ ಎಸಿಪಿ ಎ.ಆರ್. ಬಡಿಗೇರ್`ರಿಂದ ಬಿ.ಎಸ್. ಯಡಿಯೂರಪ್ಪನವರಿಗೆ ನೋಟಿಸ್ ಜಾರಿಯಾಗಿದ್ದು, ಸೆಪ್ಟೆಂಬರ್ 28ರಂದು ಬೆಳಗ್ಗೆ 10.30ಕ್ಕೆ ಖುದ್ದು ವಿಚಾರಣೆಗೆ ಹಾಜರಾಗಲು ನೋಟಿಸ್`ನಲ್ಲಿ ಸೂಚಿಸಲಾಗಿದೆ. ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ತೆರಳಿ ನೋಟಿಸ್ ನೀಡಲಾಗಿದೆ. ಬಿಎಸ್`ವೈ ನೋಟಿಸ್ ಪಡೆದಿದ್ದು, ಈ ಸಂದರ್ಭ ಪಿಎ ಸಂತೋಷ್ ಸಹ ಇದ್ದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್`ವೈ ಪಿಎ ಸಂತೋಷ್ ಸೇರಿ ಹಲವರನ್ನ ೀಗಾಗಲೇ ಪೊಲಿಸರು ವಿಚಾರಣೆಗೆ ಒಳಪಡಿಸಿದ್ದು, ನಿರೀಕ್ಷಣಾ ಜಾಮೀನು ಪಡೆದಿರುವ ಸಂತೋಷ್ ಜಾಮೀನು ರದ್ಧತಿಗೂ ಅರ್ಜಿ ಸಲ್ಲಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ