Bengaluru Rain, ಮಳೆಯಿಂದ ಹಾನಿಗೀಡಾದ ಕೆಲ ಸ್ಥಳಗಳಿಗೆ ಸಿಎಂ ಭೇಟಿ, ಅಹವಾಲು ಸ್ವೀಕಾರ

Sampriya

ಬುಧವಾರ, 21 ಮೇ 2025 (16:36 IST)
Photo Credit X
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅವಲೋಕಿಸಿದರು.

ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರು ಉಪಸ್ಥಿತರಿದ್ದರು. ನಗರದಲ್ಲಿ ಅವಘಡಕ್ಕೆ ಒಳಗಾದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.  

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಪೋಸ್ಟ್‌ ಬರೆದು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಪ್ರದಕ್ಷಿಣೆ ಮಾಡಿ ಬೆಂಗಳೂರು ನಗರದ ಮಳೆಪೀಡಿತ ಪ್ರದೇಶಗಳ ಭೇಟಿಯ
ಪ್ರಯುಕ್ತ ಇಂದು ಯಲಹಂಕದಲ್ಲಿನ ರಾಜ ಕಾಲುವೆ ಒತ್ತುವರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಒತ್ತುವರಿ ತೆರವಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವ ಬಗ್ಗೆ ದೂರು ಇದ್ದು, ಯಾರೇ ಒತ್ತುವರಿ ಮಾಡಿದ್ದರೂ, ಎಷ್ಟೇ ದೊಡ್ಡ ಬಿಲ್ಡರ್‌ಗಳೇ ಆಗಿದ್ದರೂ ಮುಲಾಜು ನೋಡದೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ