ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಹಲವೆಡೆ ಕಟ್ಟಡ ಕುಸಿತ, ಸಾವು, ನೋವಿನ ವರದಿಯಾಗಿದೆ. ರಸ್ತೆಗಳು, ಮನೆಗಳಿಗೆ ನೀರು ನುಗ್ಗಿ ಜನರಿಗೆ ದೈನಂದಿನ ಕೆಲಸಕ್ಕೆ ತೊಂದರೆ ಎದುರಾಗಿದೆ.
ಬೆಂಗಳೂರಿನಲ್ಲಿ ಇಂದೂ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯಂತೆ ಇಂದೂ ಬೆಳಗಿನ ಅವಧಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಪರಾಹ್ನದ ನಂತರ ಮಳೆ ಬಿರುಸಾಗಿ ಬರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಭಾರೀ ಮಳೆಯ ಕಾರಣ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.