Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

Krishnaveni K

ಸೋಮವಾರ, 19 ಮೇ 2025 (14:34 IST)
Photo Credit: X
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿ ರಸ್ತೆ, ಮನೆಗಳು ಜಲಾವೃತವಾಗಿದ್ದು, ವಿಪಕ್ಷಗಳು ಇದು ಗ್ರೇಟರ್ ಬೆಂಗಳೂರು ಅಲ್ಲ, ವಾಟರ್ ಬೆಂಗಳೂರು ಎಂದು ಲೇವಡಿ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಬೆಂಗಳೂರಿನ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಒಂದೆಡೆ ಸರ್ಕಾರ ಗ್ರೇಟರ್ ಬೆಂಗಳೂರು ಮಾಡಲು ಹೊರಟಿದೆ. ಬೆಂಗಳೂರನ್ನು ಒಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಹೊರಟಿದೆ. ಸಾವಿರಾರು ಕೋಟಿ ಮೀಸಲಿಡುತ್ತಿದ್ದೇವೆ ಎನ್ನುತ್ತಿದೆ. ಆದರೆ ಬೆಂಗಳೂರಿನಲ್ಲಿ ಮಳೆಗಾಲದ ಸಮಸ್ಯೆ ಮಾತ್ರ ಪರಿಹಾರವಾಗುತ್ತಿಲ್ಲ ಎಂದು ಜನ ಹಿಡಿಶಾಪ ಹಾಕುತ್ತಿದ್ದಾರೆ.

ವಿಪಕ್ಷ  ಬಿಜೆಪಿ ಇದೇ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದೆ. ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಮಾಡುತ್ತೀನಿ ಎಂದು ಹೊರಟಿದ್ದಾರೆ. ಆದರೆ ಇಲ್ಲಿ ನೋಡಿದರೆ ಇದು ವಾಟರ್ ಬೆಂಗಳೂರು ಆಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಆರ್ ಅಶೋಕ್, ಸಂಸದ ಪಿಸಿ ಮೋಹನ್ ಸೇರಿದಂತೆ ಹಲವರು ಸರ್ಕಾರದ  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ