ವಿದ್ಯುತ್ ಶುಲ್ಕ ಪಾವತಿಸಲು ಬಿಡ್ಬ್ಲೂ ಎಸ್ ಎಸ್ ಬಿ, ಬಿಡಿಎ, ಬಿಬಿಎಂಪಿಗೆ ಬೆಸ್ಕಾಂ ನೋಟಿಸ್

ಬುಧವಾರ, 16 ನವೆಂಬರ್ 2022 (21:27 IST)
ಕೋಟ್ಯಂತರ ರೂಪಾಯಿ ವಿದ್ಯುತ್ ಶುಲ್ಕ ಬಾಕಿ ಇರಿಸಿಕೊಂಡಿರುವ BWSSB, BBMP,, ತೋಟಗಾರಿಕೆ ಇಲಾಖೆ, ಬಿಡಿಎ, ನಗರ ಸಭೆ ಮತ್ತು ಗ್ರಾಮಸಭೆಗಳಿಗೆ ಬೆಸ್ಕಾಂನ ಹೆಬ್ಬಾಳ ಮತ್ತು ಜಾಲಹಳ್ಳಿ ವಿಭಾಗಗಳ  ಕಾರ್ಯನಿರ್ವಾಹಕ ಇಂಜಿನಿಯರ್ ಗಳು ಪ್ರತ್ಯೇಕ ನೋಟಿಸ್ ಜಾರಿಗೊಳಿಸಿದ್ದಾರೆ. ಬೆಸ್ಕಾಂನ ಹೆಬ್ಬಾಳ ವಿಭಾಗದ ವ್ಯಾಪ್ತಿಗೆ ಬರುವ ಉಪ ವಿಭಾಗಗಳಾದ ಗಂಗಾನಗರ (ಸಿ-4), ಕಾವಲಬೈರಸಂದ್ರ (ಸಿ-5), ಯಲಹಂಕ (ಸಿ-7) ಮತ್ತು ಸಹಕಾರನಗರ (ಸಿ -8) ಉಪ ವಿಭಾಗಗಳಿಗೆ ಬಿಡ್ಲ್ಯೂ ಎಸ್ ಎಸ್ ಬಿ, ಬಿಡಿಎ, ಬಿಬಿಎಂಪಿ, ತೋಟಗಾರಿಕೆ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನೀರು ಸರಬರಾಜು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಸೆಪ್ಟೆಂಬರ್ ಅಂತ್ಯಕ್ಕೆ 131.18 ಕೋಟಿ ರೂಪಾಯಿ ಆಗಿದ್ದು, ಬಾಕಿ ಪಾವತಿಸಲು ಹೆಬ್ಬಾಳ ಕಾರ್ಯನಿರ್ವಾಹಕ ಇಂಜಿನಿಯರ್ ನೋಟಿಸ್ ನೀಡಿದ್ದಾರೆ. ನಾಲ್ಕೂ ಉಪ ವಿಭಾಗಗಳಿಗೆ ವಿದ್ಯುತ್ ಶುಲ್ಕ ಬಾಕಿ ಇರಿಸಿಕೊಂಡಿರುವ ಸರಕಾರಿ ಸಂಸ್ಥೆಗಳ ಪೈಕಿ ಬಿಡ್ಬ್ಲೂ ಎಸ್ ಎಸ್ ಬಿ  ಅತೀ ಹೆಚ್ಚು  65.09 ಕೋಟಿ ರೂ. ಬಾಕಿ ಇರಿಸಿಕೊಂಡಿದ್ದು,   ಬಿಬಿಎಂಪಿ ನೀರು ಸರಬರಾಜು ವಿಭಾಗ 54.53 ಕೋಟಿ ರೂ. ವಿದ್ಯುತ್ ಶುಲ್ಕ ಪಾವತಿಸಬೇಕಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ