ನಗರದಲ್ಲಿ 10 ದಿನ ಬೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತ - ಕಾರಣ ಯಾಕೆ ಗೊತ್ತಾ...!

geetha

ಗುರುವಾರ, 7 ಮಾರ್ಚ್ 2024 (18:20 IST)
ಬೆಂಗಳೂರು-ನಗರದಲ್ಲಿ ಮಾರ್ಚ್ 10 ರಿಂದ 19 ರವರೆಗೆ ಪುನರ್ರಚಿಸಿದ ವೇಗವರ್ಧಿತ ವಿದ್ಯುತ್ ಅಭಿವೃದ್ಧಿ ಮತ್ತು ಸುಧಾರಣಾ ಕಾರ್ಯಕ್ರಮ ಅಡಿಯಲ್ಲಿ ಬರುವ ನಗರ ಪ್ರದೇಶಗಳಲ್ಲಿನ ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿ, ಹೊಸ ಸೇವಾ ಸಂಪರ್ಕ, ಹೆಸರು ಬದಲಾವಣೆ, ದರ ಬದಲಾವಣೆ ಮುಂತಾದ ಎಲ್ಲಾ ಐದು ಎಸ್ಕಾಂಗಳ ಸೇವೆಗಳು ಲಭ್ಯವಿರುವುದಿಲ್ಲ ಎಂದು ಎಸ್ಕಾಂ ತಿಳಿಸಿದೆ.
 
ಇಂಧನ ಇಲಾಖೆಯ ಸಾಫ್ಟ್ ವೇ‌ರ್ ಉನ್ನತೀಕರಣ ಮಾಡಲಾಗುತ್ತಿದ್ದು, ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.
 
ಆನ್ ಲೈನ್ ಸೇವೆಗಳು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆಯಾಗಲೀ, ಕಡಿತವಾಗಲೀ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
 
 
 ಈ ಕೆಳಗಿನ ನಗರ ಪ್ರದೇಶಗಳಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ 
 
 ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಪಟ್ಟಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಸ್ಕಾಂ ವ್ಯಾಪ್ತಿಯ ಸೇವೆ ಇರುವುದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ