ರಾಜ್ಯದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಾಗಾರವನ್ನು ಉದ್ಘಾಟಿಸಿದ ಸಿಎಂ, ದೇಶದಲ್ಲಿ ಅತಿ ಹೆಚ್ಚು ನವೋದ್ಯಮಗಳು ಬೆಂಗಳೂರಿನಲ್ಲಿದೆ.ರಕ್ಷಣೆ, ಇಂಜಿನಿಯರಿಂಗ್, ಅಭಿವೃದ್ಧಿ ಕಂಪನಿಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿದೆ.ಕರ್ನಾಟಕವು ಪ್ರಗತಿಪರ ರಾಜ್ಯವಾಗಿದ್ದು ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗ್ತಿದೆ ಎಂದು ಹೇಳಿದರು.ರಾಜ್ಯದಲ್ಲಿ ಕೈಗಾರಿಕಾ ನೀತಿಯ ಜೊತೆಯಲ್ಲಿ ಉದ್ಯಮ ನೀತಿಯನ್ನೂ ರಚಿಸಲಾಗುತ್ತದೆ.ಕರ್ನಾಟಕದಲ್ಲಂತೂ ಹೂಡಿಕೆಗೆ ಉತ್ತಮ ವಾತಾವರಣವಿದೆ. ಹೆಚ್ಚು ಉದ್ಯೋಗ ಸೃಷ್ಟಿಸುವವರಿಗೆ ರಾಜ್ಯ ಸರ್ಕಾರವೇ ಪ್ರಾತ್ಸಾಹ ನೀಡಲಿದೆ ಎಂದರು.