ಕೊಡಗಿನಲ್ಲಿ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರ ವಹಿಸಿ: ಜಿಲ್ಲಾಧಿಕಾರಿ

ಶನಿವಾರ, 18 ಡಿಸೆಂಬರ್ 2021 (20:02 IST)
ಜಿಲ್ಲೆಯಲ್ಲಿ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಚೆಕ್ ಪೋಸ್ಟ್‌ಗಳಿಗೆ ಆಗಾಗ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 'ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಆಯೋಜಿಸಿದ್ದ ಸಭೆಯಲ್ಲಿ ಹಕ್ಕಿಜ್ವರ ನಿಯಂತ್ರಣದ ಬಗ್ಗೆ ಮಾಹಿತಿ ಪಡೆದು ಅವರು ತಿಳಿಸಿದ್ದಾರೆ.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಸುರೇಶ್ ಭಟ್ ಅವರು, ಜಿಲ್ಲೆಯ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೇರಳ ಭಾಗದಿಂದ ಬರುವ ಪೌತ್ರಿ ವಾಹನಗಳನ್ನು ತಪಾಸಣೆ ಮಾಡಿ ರೋಗ ನಿರೋಧಕ ಔಷಧವನ್ನು ಸಿಂಪಡಿಸಿ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ನಿರ್ದೇಶಕ ಡಾ.ತಮ್ಮಯ್ಯ ಅವರು ಹಕ್ಕಿಜ್ವರ ನಿಯಂತ್ರಿಸುವ ನವೀಕೃತ ರಾಂಡಮ್ ಆಗಿ ಸ್ಯಾಂಪಲ್‌ನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ಹೇಳಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದ ಮುಖ್ಯಸ್ಥರಾದ ನಜೀಮಾ ತಬಶೀರ ಅವರು ಹಕ್ಕಿಜ್ವರ ನಿಯಂತ್ರಣ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ