ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು : ಕಾಗೇರಿ

ಸೋಮವಾರ, 5 ಡಿಸೆಂಬರ್ 2022 (09:52 IST)
ದಾವಣಗೆರೆ : ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬರಬೇಕು. ಎಲ್ಲಾ ಶಾಲೆಗಳಲ್ಲೂ ಕಡ್ಡಾಯಗೊಳಿಸಬೇಕು ಎಂಬ ಸರ್ಕಾರದ ನಿರ್ಧಾರಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಬಲ ಸೂಚಿಸಿದರು.

ದಾವಣಗೆರೆ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ-2ರ ರಾಜ್ಯ ಮಟ್ಟದ ಭಗವದ್ಗೀತಾ ಅಭಿಯಾನದ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎನ್ನುವ ಚರ್ಚೆಯಾಗುತ್ತಿದೆ. ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು. ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದರ ಜೊತೆಗೆ ಅದನ್ನ ಕಡ್ಡಾಯವಾಗಿ ಮಕ್ಕಳಿಗೆ ಕಲಿಸಬೇಕು ಎಂದು ಒತ್ತಾಯಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ