ಹಾಸನಾಂಬೆ ದೇಗುಲದಲ್ಲಿ ಭಕ್ತ ಸಾಗರ: ದೇವಿಯ ದರ್ಶನ ಪಡೆದು ಭಕ್ತರು ಪುನೀತ

Sampriya

ಭಾನುವಾರ, 27 ಅಕ್ಟೋಬರ್ 2024 (10:43 IST)
Photo Courtesy X
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಭಾನುವಾರ ವಾರಾಂತ್ಯ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಶನಿವಾರ ತಡರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಬೆಳಗ್ಗೆ ದೇವಿ ದರ್ಶನ ಪಡೆದು ಪುನೀತರಾದರು. ₹1,000., ₹300 ಶುಲ್ಕವಿರುವ ವಿಶೇಷ ದರ್ಶನದ ಸಾಲುಗಳು ಕೂಡ ಭರ್ತಿಯಾಗಿವೆ.

ರಾಜ್ಯ, ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಾಸನಾಂಬೆ ದೇವಿ ದರ್ಶನ ಪಡೆಯಲಿದ್ದಾರೆ.

ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗಿದೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹ ಸಕಲ ವ್ಯವಸ್ಥೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ