ಭಾರತ್ ಬಂದ್ ಹಿನ್ನಲೆ; ಮಡಿಕೇರಿಯಲ್ಲಿ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ಬುಧವಾರ, 8 ಜನವರಿ 2020 (10:00 IST)
ಮಡಿಕೇರಿ : ಭಾರತ್ ಬಂದ್ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿ ಸರ್ಕಾರಿ ಬಸ್ ಯೊಂದಕ್ಕೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.



ಇಂದು ಬೆಳಿಗ್ಗೆ ಮಡಿಕೇರಿಯಿಂದ ಮೈಸೂರಿಗೆ ಹೊರಟಿದ್ದ ಸರ್ಕಾರಿ ಬಸ್ ಗೆ ಮಡಿಕೇರಿ ನಗರದ ಹೊರವಲಯದ ಚೈನ್ ಗೇಟ್ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.


ಇದರ ಪರಿಣಾಮ ಬಸ್ ನ ಗಾಜು ಪುಡಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ಬಗ್ಗೆ ಬಸ್ ಚಾಲಕ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ