ಭಾರತ್ ಗೌರವ್ ಕಾಶಿ : ನಿಯಮಿತ ರೈಲು ಪ್ರವಾಸದ ವೇಳಾಪಟ್ಟಿ

ಶುಕ್ರವಾರ, 10 ಫೆಬ್ರವರಿ 2023 (11:13 IST)
ಬೆಂಗಳೂರು : ಉತ್ತರ ಭಾರತದಲ್ಲಿ ತೀವ್ರ ಚಳಿಯ ಕಾರಣದಿಂದ ಮುಂದೂಡಲಾಗಿದ್ದ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಪ್ರವಾಸದ ಮೂರನೇ ಟ್ರಿಪ್ ಫೆ. 21ರಂದು ಪ್ರಾರಂಭವಾಗಲಿದೆ.

ಪ್ರತಿ ತಿಂಗಳು ನಿಯಮಿತವಾಗಿ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲನ್ನು ಓಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ.

ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆಯ, ಐಆರ್ಸಿಟಿಸಿ ಹಾಗೂ ಮುಜರಾಯಿ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂದಿನ ಟ್ರಿಪ್ಗಳ ವೇಳಾ ಪಟ್ಟಿಯನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ