ಏಕ ಕಾಲದಲ್ಲಿ ಕಾಂಗ್ರೆಸ್ ನಿಂದ ಭಾರತ್ ಜೋಡೋ ಮತ್ತು ಕಾಂಗ್ರೆಸ್ ಚೋಡೋ
ಕಾಂಗ್ರೆಸ್ನ ಪ್ರಭಾವಿ ನಾಯಕ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದು ಬಿಜೆಪಿ ವೇದಿಕೆಯಲ್ಲಿ ಹೆಚ್ಚಿಗೆ ಕಾಣಿಸಿಕೊಂಡು ಕಾಂಗ್ರೆಸ್ಗೆ ಶಾಕ್ ಕೊಟ್ಟಿದ್ದಾರೆ.
ಮೂರು ದಿನಗಳ ಕಾಲ ಭಾರತ್ ಜೋಡೋ ಪಾದಯಾತ್ರೆ ತುಮಕೂರು ಜಿಲ್ಲೆಯಲ್ಲಿ ಸಂಚರಿಸಿ ಸೋಮವಾರ ಮಧ್ಯಾಹ್ನದ ವೇಳೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಿತ್ತು.
ಆದರೆ ಇತ್ತ ತುಮಕೂರಿನಲ್ಲಿ ನಡೆದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಭಾಗಿಯಾಗಿ ಸುರೇಶ್ ಗೌಡರ ಗುಣಗಾನ ಮಾಡುವುದರ ಜೊತೆಗೆ ಬಿಜೆಪಿಯನ್ನೂ ಹೊಗಳಿದರು.