14ನೇ 'ಭಾರತೀಯ ಪ್ರವಾಸಿ ದಿವಸ್‌'ಕ್ಕೆ ಚಾಲನೆ!

ಶನಿವಾರ, 7 ಜನವರಿ 2017 (12:21 IST)
14ನೇ 'ಭಾರತೀಯ ಪ್ರವಾಸಿ ದಿವಸ್'ಕ್ಕೆ ಚಾಲನೆ ದೊರೆತಿದ್ದು, ಸೂರಿನಾಮ್‌ನ ಉಪರಾಷ್ಟ್ರಪತಿ ಮೈಕಲ್ ಅಶ್ವಿನ್ ಅಧೀನ್ ಭಾರತೀಯ ಪ್ರವಾಸಿ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 
ಇಂದಿನಿಂದ ಮೂರು ದಿನಗಳ ಕಾಲ 14 ನೇಯ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನ ರಾಜಧಾನಿ ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ.
 
ಕೇಂದ್ರ ಕ್ರೀಡಾ ಮತ್ತು ಯುವಜನ ಖಾತೆ ಸಚಿವ ವಿಜಯ್ ಗೋಯಲ್, ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ.ಕೆ.ಸಿಂಗ್ ಹಾಗೂ ರಾಜ್ಯದ ಸಚಿವರಾದ ಆರ್.ವಿ.ದೇಶಪಾಂಡೆ, ಪ್ರಿಯಾಂಕ್ ಖರ್ಗೆ ಮತ್ತಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.   
 
ಭಾನುವಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಅನಿವಾಸಿ ಭಾರತೀಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ