ಕಮಲ’ ಹಿಡಿದ ಭಾಸ್ಕರ್ ರಾವ್

ಬುಧವಾರ, 1 ಮಾರ್ಚ್ 2023 (15:08 IST)
ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್‌ ಅಧಿಕಾರಿ ಭಾಸ್ಕರ್​ ರಾವ್​​​​ ಎಎಪಿಗೆ ಗುಡ್‌ಬೈ ಹೇಳಿದ್ದಾರೆ. ಇಂದು ಭಾಸ್ಕರ್‌ ರಾವ್‌ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಎಎಪಿ ತೊರೆದ ಭಾಸ್ಕರ್‌ ರಾವ್‌ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ದಾರೆ. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್‌ ಕುಮಾರ್ ಕಟೀಲ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಭಾಸ್ಕರ್‌ ರಾವ್‌ ಅವರ ಜೊತೆ ಅವರ ಬೆಂಬಲಿಗರು ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆ ಬಳಿಕ ಪ್ರತಿಕ್ರಿಯೆ ನೀಡಿದ ಭಾಸ್ಕರ್‌ ರಾವ್‌, ವಿಆರ್‌ಎಸ್‌ ತೆಗೆದುಕೊಂಡು ರಾಜಕೀಯ ಬದಲಾವಣೆಗೆ ಹೊರಟಿದ್ದೆ. ಆದರೆ, ಎಎಪಿ‌ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಬೆಳವಣಿಗೆ ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ, ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಬಾಲ್ಯದಿಂದಲೂ ಸನಾತನ ಧರ್ಮ, ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ. ಹಾಗಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ಭಾಸ್ಕರ್‌ ರಾವ್‌ ಹೇಳಿಕೆ ನೀಡಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ