ಭೀಮಾ ತೀರದ ಹಂತಕನ ಕೊಲೆ ಪ್ರಕರಣ: ಆರೋಪಿ ಅಂದರ್

ಗುರುವಾರ, 5 ಜುಲೈ 2018 (17:47 IST)
ಭೀಮಾತೀರದ ಗ್ರಾಮಗಳಲ್ಲೇ ರಾಜ್ಯದಲ್ಲಿಯೇ ಹೆಚ್ಚು ಸುದ್ದಿ ಮಾಡಿದ ಭೀಮಾತೀರದ ಹಂತಕ ಗಂಗಾಧರ ಚಡಚಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯ ಹೆಡೆ ಮುರಿ ಕಟ್ಟಿ ಬಂಧಿಸುವಲ್ಲಿ ಸಿಐಡಿ ಹಾಗೂ ಪೊಲೀಸ್ ರು ಯಶಸ್ವಿಯಾಗಿದ್ದಾರೆ. 
 
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡನನ್ನು ಬಂಧಿಸಲಾಗಿದೆ. ಇಂಡಿ ತಾಲೂಕಿನ ಕೆರೂರು ಗ್ರಾಮದಲ್ಲಿನ ಮನೆಯಲ್ಲಿದ್ದ ಸಂದರ್ಭದಲ್ಲಿ ಅರೆಸ್ಟ್ ಮಾಡಲಾಗಿದೆ. 
 
ಸಿಐಡಿ ಹಾಗೂ ಚಡಚಣ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ವಿಜಯಪುರದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆತಂದಿದ್ದಾರೆ. 
 
ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಮಹಾದೇವ ಸಾಹುಕಾರ ಭೈರಗೊಂಡನನ್ನು ಪೊಲೀಸರು ಹಾಜರುಪಡಿಸಿದ್ದಾರೆ. 
 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ