ಭೀಮಾನಾಯಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಪ್ರಹ್ಲಾದ್ ಜೋಶಿ

ಶನಿವಾರ, 10 ಡಿಸೆಂಬರ್ 2016 (15:13 IST)
ವಿಶೇಷ ಭೂಸ್ವಾಧೀನ ಅಧಿಕಾರಿ ಭೀಮಾನಾಯಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ಸಂಗ್ರಹದಲ್ಲಿ ಯಾವ ಪಕ್ಷದವರು ಭಾಗಿಯಾಗಿದ್ದರು ಸಹ ಕ್ರಮ ಖಚಿತ. ಚಾಲಕ ರಮೇಶ್ ಗೌಡ ಡೆತ್‌ನೋಟ್‌ನಲ್ಲಿ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಹೆಸರು ಪ್ರಸ್ತಾಪವಾಗಿದೆ. ಸಿಬಿಐ ತನಿಖೆಗೆ ನೀಡುವುದರಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದರು.
 
ತಮ್ಮ ಮಗಳ ಅದ್ಧೂರಿ ವಿವಾಹಕ್ಕೆ ಯಾವ ರೀತಿಯ ಹಣ ಬಳಕೆ ಮಾಡಿದ್ದಾರೆ ಎನ್ನುವ ಕುರಿತು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಈಗಾಗಲೇ ಆದಾಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಐಟಿ ಅಧಿಕಾರಿಗಳ ನೋಟಿಸ್‌ಗೆ ರೆಡ್ಡಿ ಉತ್ತರವನ್ನು ನೀಡಿದ್ದಾರೆ. ಅವರು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ