ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

Sampriya

ಗುರುವಾರ, 28 ಆಗಸ್ಟ್ 2025 (15:26 IST)
ಬೀದರ್‌: ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿರುವ ಡಿಪೋ–1ರಲ್ಲಿ ನಿಲ್ಲಿಸಿದ್ದ ಸ್ಲೀಪರ್‌ ಕೋಚ್‌ ಬಸ್‌ನಲ್ಲಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 

ಆತ್ಮಹತ್ಯೆಗೆ ಶರಣಾದ ಚಾಲಕರನ್ನು ಬೀದರ್‌ ತಾಲ್ಲೂಕಿನ ಆಣದೂರ ಗ್ರಾಮದ ರಾಜಕುಮಾರ (59) ಎಂದು ಗುರುತಿಸಲಾಗಿದೆ. 

ಬೀದರ್‌ ಟು ಬಳ್ಳಾರಿ ಸ್ಲೀಪರ್‌ ಕೋಚ್‌ ಬಸ್‌ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ಡಿಪೋ–1ರಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ ರಾಜಕುಮಾರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಐದು ತಿಂಗಳಲ್ಲಿ ಅವರು ಕೆಲಸದಿಂದ ನಿವೃತ್ತರಾಗುವವರಿದ್ದರು. ಅವರ ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಇನ್ನಷ್ಟೇ ಆತ್ಮಹತ್ಯೆಗೆ ಕಾರಣ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದರ್‌ನ ನೂತನ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ರಾಜಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಕೆಎಸ್‌ಆರ್‌ಟಿಸಿ ನೌಕರರ ಜಂಟಿ ಹೋರಾಟ ಸಮಿತಿ ಆಗ್ರಹಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ