ಬೀದರ್ ಶಾಲಾ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ತನಿಖೆ ಶುರು!

ಭಾನುವಾರ, 5 ಸೆಪ್ಟಂಬರ್ 2021 (17:52 IST)
ಪೌರತ್ವ ಕಾಯ್ದೆ (ಸಿಎಎ) ನಾಟಕ ಪ್ರದರ್ಶನ ಮಾಡಿದರು ಎಂಬ ಕಾರಣಕ್ಕೆ ಬೀದರ್ ಶಾಲೆಯ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಮಾಡಿದ ಪೊಲೀಸರ ವಿರುದ್ಧ ಇದೀಗ ತನಿ
ಖೆ ಆರಂಭವಾಗಿದೆ.
ಬೀದರ್ ನ ಶಹೀನ್ ಶಾಲೆಯ ವಾರ್ಷಿಕೋತ್ಸವದ ವೇಳೆ ಸಿಎಎ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ನಡೆದಿತ್ತು. ಈ ಬಗ್ಗೆ ಪೊಲೀಸರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಿದ್ದರು.
ಈ ಘಟನೆ ನಡೆದು 18 ತಿಂಗಳ ನಂತರ ನ್ಯಾಯಾಲಯಕ್ಕೆ ವರದಿ ನೀಡಿರುವ ರಾಜ್ಯ ಸರಕಾರ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆದಿದೆ ಎಂದು ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ನೀಡಿದ ವರದಿಯಲ್ಲಿ ಮಕ್ಕಳ ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಡಿಜಿಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಹೇಳಿದೆ. ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ ಮಕ್ಕಳ ವಿಚಾರಣೆ ನಡೆಸಿದ ಪೊಲೀಸ್ ಸಿಬ್ಬಂದಿ ಸಮವಸ್ತ್ರ ಧರಿಸಿರಲಿಲ್ಲ ಎಂದು ವಿವರಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ