ಬಿಜೆಪಿಯಲ್ಲಿ ಭಾರೀ ಬದಲಾವಣೆ : ಸಿ.ಟಿ.ರವಿ, ತೇಜಸ್ವಿ ಸೂರ್ಯಗೆ ಲಕ್

ಶನಿವಾರ, 26 ಸೆಪ್ಟಂಬರ್ 2020 (19:36 IST)
ರಾಷ್ಟ್ರೀಯ ಬಿಜೆಪಿ ಘಟಕದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಕೆಲವೆಡೆ ಹೊಸ ಮುಖಂಡರಿಗೆ ಪಕ್ಷ ಕಟ್ಟುವ ಹೊಣೆ ವಹಿಸಲಾಗಿದೆ.

ರಾಜ್ಯದ ಸಂಸದ ತೇಜಸ್ವಿ ಸೂರ್ಯ ಅವರಿಗೆ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸಿ.ಟಿ.ರವಿ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿ ಕೊಡಲಾಗಿದೆ.

ಬಿಜೆಪಿ ಹೈಕಮಾಂಡ್ ಈ ನೂತನ ನಿರ್ಧಾರ ಕೈಗೊಂಡಿದ್ದು, ಹೊಸ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ.

ತೇಜಸ್ವಿ ಸೂರ್ಯ ಹಾಗೂ ಸಿ.ಟಿ.ರವಿಗೆ ರಾಜ್ಯದ ಬಿಜೆಪಿ ಮುಖಂಡರು ಶುಭ ಕೋರುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ