ಆ.29ರವರೆಗೆ ಸಿಎಂ ಸಿದ್ದರಾಮಯ್ಯ ಸೇಫ್: ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿಕೆ

Sampriya

ಸೋಮವಾರ, 19 ಆಗಸ್ಟ್ 2024 (17:40 IST)
Photo Courtesy X
ಬೆಂಗಳೂರು: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಆ 29ರ ವರೆಗೆ ಯಾವುದೇ ಆದೇಶ ನೀಡದಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ಬೀಸುವ  ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆದೇಶ ನೀಡಿದ್ದರು. ಈ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಾದ, ಪ್ರತಿವಾದ ಆಲಿಸಿತು. ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿಕೆ ಮಾಡಿದೆ.

ಎಫ್‌ಐಆರ್‌ ದಾಖಲಾಗುವ ಭಯದಲ್ಲಿದ್ದ ಸಿಎಂಗೆ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಒಂದು ವೇಳೆ ಕೋರ್ಟ್‌ ವಿಚಾರಣೆಗೆ ಸಮ್ಮತಿಸುತ್ತಿದ್ದರೆ, ಸಿಎಂ ವಿರುದ್ಧ ಪಿಸಿಆರ್ ದಾಖಲಾಗುತ್ತಿತ್ತು. ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿತ್ತು. ಆದರೆ ಇದೀಗ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ