ಡಿಕೆಶಿಗೆ ಬಿಗ್‌ ರಿಲೀಫ್‌

ಬುಧವಾರ, 17 ಮೇ 2023 (18:42 IST)
KPCC ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ CBI ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್, ಜುಲೈ 14ಕ್ಕೆ ಮುಂದೂಡಿದೆ. ಆದರೆ CBI ಪರ ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಇದರಿಂದ ರಾಜ್ಯದಲ್ಲಿ ಸಿಎಂ ಸ್ಥಾನ ಗಿಟ್ಟಿಸಲು ಪ್ರಯತ್ನಿಸುತ್ತಿರುವ ಅವರಿಗೆ ಅದರ ನಡುವೆ ನಿರಾಳತೆ ದೊರಕಿದೆ. ನ್ಯಾಯಮೂರ್ತಿಗಳಾದ BR ಗವಾಯ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ನ್ಯಾಯಪೀಠ ಬುಧವಾರ CBI ಅರ್ಜಿಯನ್ನು ಕೈಗೆತ್ತಿಕೊಂಡಿತು. ಡಿಕೆ ಶಿವಕುಮಾರ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಪ್ರಕರಣವು ಮೇ 23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಮಾಹಿತಿ ನೀಡಿದರು. ಇದರ ಬಳಿಕ ನ್ಯಾಯಪೀಠ ಪ್ರಕರಣ ಮುಂದೂಡಿತು. ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಸಿದ ಭ್ರಷ್ಟಾಚಾರ ಪ್ರಕರಣದ ಸಿಬಿಐ ತನಿಖೆಗೆ ಫೆಬ್ರವರಿ 10ರಂದು ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು. ಇದರ ಬಳಿಕ ಅನೇಕ ಬಾರಿ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಲಾಗಿತ್ತು. ತಮ್ಮ ವಿರುದ್ಧದ ಪ್ರಕರಣ ಹಾಗೂ ತನಿಖೆಯನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ