ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ
ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಅಭಿಯೋಜನೆ ಮತ್ತು ಪೊಲೀಸ್ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠವು 2024ರ ಸೆ. 24ರಂದು ಆದೇಶಿಸಿತ್ತು. ಈ ತೀರ್ಪಿನಲ್ಲಿ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ಹೇಳಿತ್ತು.