ಸಿಟಿ ರವಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್‌: ಬಿಜೆಪಿ ಕಾರ್ಯಕರ್ತರ ಸಂಭ್ರಮ

Sampriya

ಶುಕ್ರವಾರ, 20 ಡಿಸೆಂಬರ್ 2024 (17:37 IST)
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಮೂಲಕ ಸಿಟಿ ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್ ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸುತ್ತಿದ್ದ ಹಾಗೇ ಸಿಟಿ ರವಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಸಿಟಿ ರವಿ ಅವರನ್ನು ಸ್ವಾಗತಿಸಲು ಬೆಂಬಲಿಗರು ಕಾದು ನಿಂತಿದ್ದಾರೆ.

ಬೆಳಗಾವಿಯಲ್ಲಿ ಡಿ. 19ರಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿಟಿ ರವಿ ನಿಂದಿಸಿದ್ದು ರಾಜ್ಯ ರಾಜಕೀಯದಲ್ಲಿ ದೊಡ್ಡ ರಾದ್ಧಾಂತವಾಗಿದೆ. ಮಹಿಳೆಯರಿಗೆ ಅಪಮಾನವಾಗುವಂಥ ಬಳಸಿದ್ದಕ್ಕಾಗಿ ಅವರ ವಿರುದ್ಧ ದೂರು ದಾಖಲಾಗಿದ್ದು ಎಫ್ಐಆರ್ ದಾಖಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ