ಬೆಂಗಳೂರು : ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022 ರ ಜನವರಿ 9 ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮನಗರ ತಹಶೀಲ್ದಾರ್ ಜನವರಿ 13 ರಂದು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು.