ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್; ಸರ್ಕಾರದ ಮೇಲೆ ಬೇಸರಗೊಂಡು ಭರವಸೆ ಸಮಿತಿಯ ಅಧ್ಯಕ್ಷ ರಾಜೀನಾಮೆ
ಶನಿವಾರ, 15 ಜೂನ್ 2019 (11:22 IST)
ಬೆಂಗಳೂರು : ಭೂಕಬಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆ ಮೈತ್ರಿ ಸರ್ಕಾರದ ಮೇಲೆ ಬೇಸರಗೊಂಡು ಭರವಸೆಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರಕಲಗೂಡು ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಕೆಂಗೇರಿ ಸಮೀಪದ ಬಿಎಂ ಕಾವಲು ಪ್ರದೇಶದಲ್ಲಿ 305 ಎಕರೆ ಭೂಗಳ್ಳರ ಪಾಲಾಗಿದೆ. ಈ ವಿಚಾರವನ್ನು ಶಾಸಕರು ಕಳೆದ ಬೆಳಗಾವಿ ಅಧಿವೇಶನದಲ್ಲೂ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ ಭೂಗಳ್ಳರಿಂದ ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಮೈತ್ರಿ ಸರ್ಕಾರ ಹಿಂದೆ ಸರಿದ ಕಾರಣ ಬೇಸರಗೊಂಡು ರಾಮಸ್ವಾಮಿ ಅವರು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ರಾಜಾಜಿ ನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್, ಸರ್ಕಾರದ ಭರವಸೆ ಸಮಿತಿಯ ಅಧ್ಯಕ್ಷ ಎ.ಟಿ.ರಾಮಸ್ವಾಮಿಯವರು ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ಸರ್ಕಾರದ ಭರವಸೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.