ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್
ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.
ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.