ಬಿಜೆಪಿಗೆ ಬಿಗ್ ಶಾಕ್; ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಇಬ್ಬರು ಸಚಿವರು ಗೈರು
ಶುಕ್ರವಾರ, 28 ಸೆಪ್ಟಂಬರ್ 2018 (11:28 IST)
ಬೆಂಗಳೂರು : ಇಂದು ನಡೆಯಲಿರುವಪಾಲಿಕೆಯ 19ನೇ ಅವಧಿಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ನಿರ್ಮಾಲ ಸೀತಾರಾಮ್ ಅವರು ಭಾಗವಹಿಸುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ.
ಮೇಯರ್, ಉಪಮೇಯರ್ ಸ್ಥಾನವನ್ನು ತಮ್ಮದಾಗಿಸಿಕೊಳ್ಳಬೇಕು ಅಂತ ಕನಸು ಕಾಣುತ್ತಿರುವ ಬಿಜೆಪಿಗೆ ಇದರಿಂದ ಹೊಡೆತ ಬಿದ್ದಂತಾಗಿದೆ. ನಿರ್ಮಲ ಸೀತಾರಾಮ್ ಅವರು ಪ್ರಧಾನಿ ಮೋದಿಯವರ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿರುವುದರಿಂದ ಚುನಾವಣೆಗೆ ಗೈರು ಹಾಜರಾಗುತ್ತಿದ್ದಾರೆ ಎನ್ನಲಾಗಿದೆ. ಇನ್ನು ಅನಂತ್ ಕುಮಾರ್ ಅವರು ವಿದೇಶದಲ್ಲಿ ಆನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಈ ಇಬ್ಬರು ಚುನಾವಣೆಯಲ್ಲಿ ಭಾಗವಹಿಸುತ್ತಿಲ್ಲ.
ಇನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲಿಕೆಯ 198 ಸದಸ್ಯರು, 9 ರಾಜ್ಯಸಭಾ ಸದಸ್ಯರು, 5 ಲೋಕಸಭಾ ಸದಸ್ಯರು, 19 ವಿಧಾನ ಪರಿಷತ್ ಸದಸ್ಯರು ಹಾಗೂ 28 ವಿಧಾನಸಭಾ ಸದಸ್ಯರಿಗೆ ಮತದಾನ ಮಾಡಲು ಅವಕಾಶವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.