ಜೆಡಿಎಸ್ ಗೆ ಬಿಗ್ ಶಾಕ್ ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಾ.ರಾ.ಮಹೇಶ್

ಬುಧವಾರ, 16 ಅಕ್ಟೋಬರ್ 2019 (11:17 IST)
ಮೈಸೂರು : ಜೆಡಿಎಸ್ ನ ಶಾಸಕ ಸಾ.ರಾ.ಮಹೇಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಜೆಡಿಎಸ್ ಗೆ ಬಿಗ್ ಶಾಕ್ ನೀಡಿದ್ದಾರೆ.




ಸಾ.ರಾ.ಮಹೇಶ್ ಅವರು ಸೆಪ್ಟಂಬರ್ 18ರಂದೇ ರಾಜೀನಾಮಿ ಸಲ್ಲಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಾಸ್ಸು ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಯ ಹೊತ್ತಲೇ ಸಾರಾ ಮಹೇಶ್ ಈ ನಿರ್ಧಾರ ಜೆಡಿಎಸ್ ನ್ನು ಸಂಕಷ್ಟಕ್ಕೆ ಸಿಲುಕಿಸಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಾ ಮಹೇಶ್, ನಾನು ಸೆಪ್ಟಂಬರ್ 18ರಂದೇ ರಾಜೀನಾಮೆ ಸಲ್ಲಿಸಿದ್ದೇನೆ. ಮಾನಸಿಕವಾಗಿ ನೊಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ.  ಸ್ಪೀಕರ್ ಇರದ ಕಾರಣ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದೇನೆ, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಾಸ್ಸು ಪಡೆಯುವುದಿಲ್ಲ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ