ರಾಜ್ಯದ ವಿವಿಧ ಸಹಕಾರ ಸಂಘಗಳ ಸದಸ್ಯರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ ಸರ್ಕಾರದ ತಿದ್ದುಪಡಿ ಕ್ರಮ ಸರಿಯಿದೆ ಎಂದು ಅಭಿಪ್ರಾಯಪಟ್ಟು, ಎಲ್ಲ ತಕರಾರು ಅರ್ಜಿಗಳನ್ನು ವಜಾಗೊಳಿಸಿ ಆದೇಶ ನೀಡಿದೆ. ಸಹಕಾರ ಸಂಘಗಳ ಕಾಯ್ದೆಗೆ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ ಸೆಕ್ಷನ್ 20(ಎ) ಹೇಳುವ ಎರಡೂ ನಿಬಂಧನೆಗಳು 2021ರ ಆಗಸ್ಟ್ 4ರ ನಂತರ ನಡೆಯುವ ಚುನಾವಣೆಗಳಿಗೆ ಅನ್ವಯವಾಗುತ್ತವೆ ಎಂದು ಕೋರ್ಟ್ ಹೇಳಿದೆ.